
ತುಮಕೂರು: ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಸಮೀಪ ನಡೆದಿದೆ.
ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತುಮಕೂರು ತಾಲೂಕಿನ ಕೋರಾ ಸೇತುವೆ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನು ಪತ್ತೆಯಾಗಿಲ್ಲ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.