ಚೆನ್ನೈ: ಮಧುರೈ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾ ನಿರತ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಇ. ಪಳನಿಸ್ವಾಮಿ ಮತ್ತು ಎಐಎಡಿಎಂಕೆ ಶಾಸಕ ಪಿ.ಆರ್. ಸೆಂಥಿ;್ ನಾಥನ್ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.
ಪ್ರಯಾಣಿಕರು ಫೇಸ್‌ಬುಕ್ ಲೈವ್ ಸ್ಟ್ರೀಮ್ ಅನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ. ಜಯಲಲಿತಾ ಅವರ ಆಪ್ತರಾದ ವಿ.ಕೆ. ಶಶಿಕಲಾ ಅವರಿಗೆ ಇಪಿಎಸ್ ಅವರು ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.