ಕನೌಜ್: ಉತ್ತರ ಪ್ರದೇಶದ ಬಲ್ಲಾರ್ ಪುರದ ಶಾಲೆಯೊಂದರಲ್ಲಿ 8 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ಪ್ರೇಮ ಪತ್ರ ಬರೆದ ಶಿಕ್ಷಕನನ್ನು ಅಮಾನತುಗೊಳಿಸಲಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಶುಕ್ರವಾರ ಶಿಕ್ಷಕ ಹರಿಓಂ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಕುನ್ವರ್ ಅನುಪಮ್ ಸಿಂಗ್ ತಿಳಿಸಿದ್ದಾರೆ.
ಹರಿಓಂ ಸಿಂಗ್ ಅವರು ಡಿಸೆಂಬರ್ 30 ರಂದು 8 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ಪತ್ರ ನೀಡಿದ ಆರೋಪ ಎದುರಿಸುತ್ತಿದ್ದಾರೆ.
ವಿದ್ಯಾರ್ಥಿನಿ ಮನೆಗೆ ತಲುಪಿದಾಗ, ಕಾರ್ಡ್‌ನಲ್ಲಿ 12 ಸಾಲುಗಳ ಕೈಬರಹದ ಪತ್ರವನ್ನು ಹೊಂದಿದ್ದು, ಅವಳ ಮೇಲಿನ ಅವನ ಪ್ರೀತಿಯ ನಿವೇದನೆ ಮಾಡಿಕೊಳ್ಳಲಾಗಿತ್ತು. ವಿಷಯ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲಾ ಮೂಲ ಶಿಕ್ಷಾ ಅಧಿಕಾರಿ(ಬಿಎಸ್‌ಎ) ಕೌಸ್ತುಭ್ ಸಿಂಗ್ ಶಿಕ್ಷಕನನ್ನು ಅಮಾನತುಗೊಳಿಸಿದ್ದಾರೆ. ಪ್ರಕರಣದ ತನಿಖೆಯನ್ನು ಬ್ಲಾಕ್ ಶಿಕ್ಷಣಾಧಿಕಾರಿ ವಿಪಿನ್ ಕುಮಾರ್ ಅವರಿಗೆ ವಹಿಸಲಾಗಿದೆ.