alex Certify BREAKING: 9 ಜಿಲ್ಲೆಗಳಲ್ಲಿ ಶೂನ್ಯ; ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 9 ಜಿಲ್ಲೆಗಳಲ್ಲಿ ಶೂನ್ಯ; ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 213 ಜನರಿಗೆ ಸೋಂಕು ತಗುಲಿದ್ದು, 370 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,93,352 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 38,174 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,48,053 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.26 ರಷ್ಟು ಇದೆ. ರಾಜ್ಯದಲ್ಲಿ 7096 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 134 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 245 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5845 ಸಕ್ರಿಯ ಪ್ರಕರಣಗಳು ಇವೆ/

ಬಾಗಲಕೋಟೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಗದಗ, ಹಾವೇರಿ, ಕೋಲಾರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 134, ದಕ್ಷಿಣಕನ್ನಡ 12, ಮೈಸೂರು 17 ಪ್ರಕರಣ ವರದಿಯಾಗಿವೆ. ಬೆಂಗಳೂರು ನಗರ 2, ಕೋಲಾರ 2 ಹಾಗೂ ರಾಮನಗರ ಜಿಲ್ಲೆಯಲ್ಲಿ 1 ಸೇರಿ ರಾಜ್ಯದಲ್ಲಿ 5 ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...