alex Certify BIG NEWS: ದಕ್ಷಿಣ ಕನ್ನಡ, ಮೈಸೂರು, ತುಮಕೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಭಾರಿ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಕ್ಷಿಣ ಕನ್ನಡ, ಮೈಸೂರು, ತುಮಕೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಭಾರಿ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 25,005 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 31,24,524 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 8 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 38,397 ಕ್ಕೆ ಏರಿಕೆಯಾಗಿದೆ. ಇಂದು 2363 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 29,70,365 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಬರೋಬ್ಬರಿ 1,15,733 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 12.39 ರಷ್ಟು ಏರಿಕೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 18,374 ಜನರಿಗೆ ಸೋಂಕು ತಗಲಿದ್ದು, ಮೂವರು ಮೃತಪಟ್ಟಿದ್ದಾರೆ. 1132 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 90,893 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಮಾಹಿತಿ:

ಬಳ್ಳಾರಿ 185, ಬೆಳಗಾವಿ 276, ಬೆಂಗಳೂರು ಗ್ರಾಮಾಂತರ 390, ಬೀದರ್ 97, ಚಾಮರಾಜನಗರ 176, ಚಿಕ್ಕಬಳ್ಳಾಪುರ 119, ಚಿಕ್ಕಮಗಳೂರು 90, ದಕ್ಷಿಣಕನ್ನಡ 625, ದಾವಣಗೆರೆ 92, ಧಾರವಾಡ 399, ಹಾಸನ 490, ಕಲಬುರ್ಗಿ 346, ಕೋಲಾರ 293, ಮಂಡ್ಯ 406, ಮೈಸೂರು 695, ರಾಯಚೂರು 122, ರಾಮನಗರ 112, ಶಿವಮೊಗ್ಗ 212, ತುಮಕೂರು 547, ಉಡುಪಿ 379, ಉತ್ತರಕನ್ನಡ 250 ಹೊಸ ಪ್ರಕರಣ ವರದಿಯಾಗಿವೆ.

ಬೆಳಗಾವಿ 1, ಬೆಂಗಳೂರು ನಗರ 3, ಕಲಬುರ್ಗಿ 1, ಮೈಸೂರು 1, ತುಮಕೂರು 1, ವಿಜಯಪುರ 1 ಸೇರಿ ರಾಜ್ಯದಲ್ಲಿ 8 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...