ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 973 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 17 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
1071 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 17,386 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿಂದು 1,39,090 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.69 ರಷ್ಟು ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 243 ಜನರಿಗೆ ಸೋಂಕು ತಗುಲಿದೆ. 260 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 8 ಜನ ಸಾವನ್ನಪ್ಪಿದ್ದಾರೆ. 7180 ಸಕ್ರಿಯ ಪ್ರಕರಣಗಳಿವೆ.