ಬೆಂಗಳೂರು: ಮೇಕೆದಾಟು ಪಾದಯಾತ್ರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪೂರ್ಣ ಅಧಿಕಾರ ನೀಡಿದ್ದಾರೆ. ಪಾದಯಾತ್ರೆ ಕೈಗೊಂಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಕೈಗೊಂಡ ಪಾದಯಾತ್ರೆಗೆ ಅಡ್ಡಿಪಡಿಸಿದರೆ ಅವರು ಸಿಂಪಥಿ ಗಿಟ್ಟಿಸಿಕೊಳ್ಳುತ್ತಾರೆ ಎಂದು ತಡೆ ನೀಡದಿರಲು ನಿರ್ಧರಿಸಲಾಗಿತ್ತು. ಆದರೆ, ಕ್ರಮಕೈಗೊಳ್ಳದಿದ್ದರೆ ಜನರಿಂದ ವಿರೋಧ ವ್ಯಕ್ತವಾಗುತ್ತದೆ. ರಾಜ್ಯದಲ್ಲಿ ಕೊರೋನಾ ತಡೆಯಲು ಕರ್ಫ್ಯೂ ಜಾರಿಗೊಳಿಸಿರುವ ಸಂದರ್ಭದಲ್ಲಿ ಕಾಂಗ್ರೆಸ್ ಅಪಾರ ಸಂಖ್ಯೆಯ ಜನರನ್ನು ಸೇರಿಸಿ ಪಾದಯಾತ್ರೆ ಕೈಗೊಂಡಿದ್ದರೂ ಸರ್ಕಾರ ತಡೆಯಲಿಲ್ಲ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.
ಇದೇ ಕಾರಣಕ್ಕೆ ಸರ್ಕಾರ ಪಾದಯಾತ್ರೆ ತಡೆಯಬೇಕೆ? ಬೇಡವೇ ಎಂಬ ಗೊಂದಲಕ್ಕೆ ಸಿಲುಕಿತ್ತು. ಯಾತ್ರೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ನಾವು ಕಾಂಗ್ರೆಸ್ ಪಕ್ಷದ ಪಾದಯಾತ್ರೆ ತಡೆಯುವುದಿಲ್ಲ. ಆದರೆ ಪಾದಯಾತ್ರೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಕೇಸ್ ಹಾಕಲಾಗುತ್ತದೆ ಎಂದು ಸಿಎಂ ಸಚಿವರೊಂದಿಗಿನ ಸಭೆಯಲ್ಲಿ ಹೇಳಿದ್ದಾರೆನ್ನಲಾಗಿದೆ.
ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆ ತಡೆಯದಂತೆ ಮುಖ್ಯಮಂತ್ರಿಗೆ ಅನೇಕ ಸಚಿವರು ಸಲಹೆ ನೀಡಿದ್ದಾರೆ. ನಾವು ಕಾಂಗ್ರೆಸ್ ಪಾದಯಾತ್ರೆ ತಡೆಯುವುದಿಲ್ಲ. ಆದರೆ, ಪಾದಯಾತ್ರೆ ಮಾಡಿದವರ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೇ ಪಾದಯಾತ್ರೆ ಕೈಗೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.