alex Certify BREAKING : ಶೃಂಗೇರಿಯಲ್ಲಿ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣ : ತಾಯಿ ಸೇರಿ ನಾಲ್ವರಿಗೆ 20 ವರ್ಷ ಜೈಲು ಶಿಕ್ಷೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶೃಂಗೇರಿಯಲ್ಲಿ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣ : ತಾಯಿ ಸೇರಿ ನಾಲ್ವರಿಗೆ 20 ವರ್ಷ ಜೈಲು ಶಿಕ್ಷೆ..!

ಚಿಕ್ಕಮಗಳೂರು : ಜಿಲ್ಲೆಯ ಶೃಂಗೇರಿ ತಾಲೂಕಿನ ಗೋಚವಳ್ಳಿಯಲ್ಲಿ ಹೆತ್ತ ತಾಯಿಯೇ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ಪ್ರಕರಣ ಸಂಬಂಧ ಚಿಕ್ಕಮಗಳೂರು ವಿಶೇಷ ಕೋರ್ಟ್ ಬಾಲಕಿಯ ತಾಯಿ ಸೇರಿ ನಾಲ್ವರು ದೋಷಿಗಳು ಎಂದು ತೀರ್ಪು ಪ್ರಕಟಿಸಿದ್ದು, 20 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿದ್ದಾರೆ. ಸಂತ್ರಸ್ತೆ ಬಾಲಕಿ ತಾಯಿ ಗೀತಾ ಮತ್ತು ಆಕೆಗೆ ಸಹಾಯ ಮಾಡಿದ್ದ ಗಿರೀಶ್, ದೇವಿಶರಣ್, ಅಭಿನಂದನ್ ಅಲಿಯಾಸ್ ಸ್ಮಾಲ್ ಅಭಿಗೆ ತಲಾ 25 ಸಾವಿರ ದಂಡ ಹಾಗೂ 20 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಮೂರ್ತಿ ಶಾಂತಣ್ಣ ಆಳ್ವ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರಿನ ತ್ವರಿತ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದ್ದು, 53 ಜನರ ಪೈಕಿ 49 ಜನರನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ. ನಾಲ್ವರನ್ನು ದೋಷಿಗಳು ಎಂದು ಕೋರ್ಟ್ ಆದೇಶಿಸಿದೆ.

ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ನೂಕಿದ್ದ ತಾಯಿ ಗೀತಾಗೆ ಸಲ್ಮಾ ಅಭಿ, ಗಿರೀಶ್, ದೇವಿ ಶರಣ್ ಎನ್ನುವವರು ಸಹಾಯ ಮಾಡಿದ್ದರು. ತಾಯಿಯ ಕಿರುಕುಳ, ಹಿಂಸೆಗೆ ಬಾಲಕಿ ವೇಶ್ಯಾವಾಟಿಕೆ ಒಪ್ಪಿದ್ದಳು. 2020ರ ಸೆಪ್ಟೆಂಬರ್ 1 ರಿಂದ 2021ರ ಜನವರಿ 27ವರೆಗೆ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆದಿತ್ತು. ಶೃಂಗೇರಿ ತಾಲೂಕಿನ ಕುಂಚೆಬೈಲ್ ಬಳಿಯ ಗೋಚವಲ್ಲಿ ಗ್ರಾಮದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಬಗ್ಗೆ ಖಚಿತ್ತ ಮಾಹಿತಿ ಪಡೆದ ಪೊಲೀಸರು 2021ರಲ್ಲಿ ದಾಳಿ ನಡೆಸಿ ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿದ್ದರು. ಪ್ರಕರಣ ಸಂಬಂಧ 53 ಜನರನ್ನು ಬಂಧಿಸಿದ್ದರು.

ಸಾಂದರ್ಭಿಕ ಚಿತ್ರ

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...