alex Certify BIG NEWS: ನಟಿ ಕತ್ರಿನಾ ಕೈಫ್ – ವಿಕ್ಕಿ ಕೌಶಲ್ ದಂಪತಿಗೆ ಜೀವ ಬೆದರಿಕೆ; ದೂರು ದಾಖಲಿಸಿಕೊಂಡ ಮುಂಬೈ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟಿ ಕತ್ರಿನಾ ಕೈಫ್ – ವಿಕ್ಕಿ ಕೌಶಲ್ ದಂಪತಿಗೆ ಜೀವ ಬೆದರಿಕೆ; ದೂರು ದಾಖಲಿಸಿಕೊಂಡ ಮುಂಬೈ ಪೊಲೀಸರು

ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ಅವರ ಪತಿ ವಿಕ್ಕಿ ಕೌಶಲ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಸಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚೆಗಷ್ಟೇ ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಜೀವ ಬೆದರಿಕೆ ಪತ್ರ ಬಂದಿದ್ದು, ಈ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ನಾಲ್ಕು ದಿನಗಳ ಹಿಂದೆ ಮುಂಬೈ ಪೊಲೀಸ್ ಕಮಿಷನರ್ ಅವರನ್ನು ಭೇಟಿ ಮಾಡಿದ್ದರು.

ಇದೀಗ ಕತ್ರಿನಾ ಕೈಫ್ ಮತ್ತು ಅವರ ಪತಿ ವಿಕ್ಕಿ ಕೌಶಲ್ ಅವರಿಗೆ ಜೀವ ಬೆದರಿಕೆ ಬಂದಿದ್ದು ಈ ಹಿನ್ನಲೆಯಲ್ಲಿ ಮುಂಬೈನ ಸಂತಾಕ್ರೂಝ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯಾವ ಕಾರಣಕ್ಕೆ ಈ ದಂಪತಿಗೆ ಜೀವ ಬೆದರಿಕೆ ಬಂದಿದೆ ಎಂಬುದು ತನಿಖೆ ಬಳಿಕವಷ್ಟೇ ತಿಳಿದು ಬರಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...