
ಬಳ್ಳಾರಿ: ವಿಧಾನಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಅವರು ತಪ್ಪು ಮಾಹಿತಿ ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರುಣಾ ಲಕ್ಷ್ಮಿ ಅವರು ವಾಹನಗಳು ಮತ್ತು ಆಸ್ತಿಯ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಬಾವಿ ಶ್ರೀನಿವಾಸ್ ರಂಗಾರೆಡ್ಡಿ ಜನವರಿ 8ರಂದು ದೂರು ಸಲ್ಲಿಸಿದ್ದರು. ಈ ಬಗ್ಗೆ ತನಿಖೆಗೆ ಅನುಮತಿ ನೀಡುವಂತೆ ಪೊಲೀಸರು ಜಿಲ್ಲಾ ನ್ಯಾಯಾಲಯಕ್ಕೆ ಮನಭಿ ಮಾಡಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ಮಾರ್ಚ್ 7ರಂದು ಅರುಣಾ ಲಕ್ಷ್ಮಿ ಅವರ ವಿರುದ್ಧ ದಾಖಲಿಸಲಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ಅರುಣಾ ಲಕ್ಷ್ಮಿ ಅವರು ಬಳ್ಳಾರಿ ನಗರ ಕ್ಷೇತ್ರದಿಂದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.