
ಉಡುಪಿ: ದ್ವೇಷ ಭಾವನೆಯಿಂದ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ವಿರುದ್ಧ ಮಲ್ಪೆ ಠಾಣೆ ಪೋಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆಯಲ್ಲಿ ಪ್ರಮೋದ್ ಮಧ್ವರಾಜ್ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಮಲ್ಪೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಮನೆಗೆ ಕಳ್ಳರು ಬಂದರೆ ನಾವು ಏನು ಮಾಡುತ್ತೇವೆ? ಪೊಲೀಸರು ಬರುವುದಕ್ಕೆ ಐದಾರು ಗಂಟೆ ತಡವಾದಲ್ಲಿ ನಾವು ಏನು ಮಾಡುತ್ತೇವೆ? ಕಳ್ಳರನ್ನು ಕಟ್ಟಿ ಹಾಕಲೇಬೇಕು? ತಲವಾರ್, ಮಚ್ಚಿನಲ್ಲಿ ಹೊಡೆದಿದ್ದೇವಾ? ಕೇವಲ ಕೆನ್ನೆಗೆ ಬಾರಿಸಿದ್ದೇವೆ ಎಂದು ಮಹಿಳೆಗೆ ಸಾರ್ವಜನಿಕವಾಗಿ ಕಟ್ಟಿಹಾಕಿ ಹೊಡೆದಿರುವುದನ್ನು ಸಮರ್ಥನೆ ಮಾಡಿಕೊಂಡಿದ್ದಾರೆ ಎಂದು ತಿಳಿಸಲಾಗಿದೆ.