
ಮೈಸೂರು: ಮೈಸೂರು ಚಾಮುಂಡೇಶ್ವರಿ ದೇವಾಲಯದ ಸೀರೆ ಕಳ್ಳತನ ಆರೋಪದಡಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ವಿರುದ್ಧ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿ ರೂಪಾ ಅವರು ನೀಡಿದ ದೂರಿನ ಮೇರೆಗೆ ಕೇಸು ದಾಖಲಿಸಲಾಗಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿ, ಕರ್ತವ್ಯಕ್ಕೆ ಅಡ್ಡಿ ಆರೋಪ ಮಾಡಲಾಗಿದೆ. ನಿನ್ನೆ ರಾತ್ರಿ ಕೆಆರ್ ಠಾಣೆಗೆ ರೂಪಾ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ರಮ ಕೈಗೊಂಡಿದ್ದಾರೆ.