alex Certify BREAKING: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8 ಕೋಟಿ ರೂ. ವಶಕ್ಕೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8 ಕೋಟಿ ರೂ. ವಶಕ್ಕೆ…?

ಚಿತ್ರದುರ್ಗ: ಹೊಳಲ್ಕೆರೆ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಇನೋವಾ ಕಾರ್ ನಲ್ಲಿ ಸಾಗಿಸುತ್ತಿದ್ದ 8 ಕೋಟಿ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿ ಬಳಿ ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಾಹನ ಸಮೇತ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿತ್ರದುರ್ಗದ ಉದ್ಯಮಿಯೊಬ್ಬರಿಗೆ ಸೇರಿದ ಹಣ ಇದಾಗಿದ್ದು, ಶಿವಮೊಗ್ಗಕ್ಕೆ ಹಣ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

ಈ ಕುರಿತಾಗಿ ಯಾವುದೇ ದೂರು ದಾಖಲಾಗಿಲ್ಲ. ವಿಚಾರಣೆ ಬಳಿಕ ಕೇಸ್ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...