ಬೆಂಗಳೂರು: ಉಪ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಜಾತಿ ಗಣತಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ನೇತೃತ್ವದಲ್ಲಿ ಪದಾಧಿಕಾರಿಗಳು ಮತ್ತು ವಿವಿಧ ಸಮುದಾಯಗಳ ಮುಖಂಡರು ಸೇರಿ ನೂರಕ್ಕೂ ಹೆಚ್ಚು ಮಂದಿಯ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿ ಮಾಡಿ ಜಾತಿ ಗಣತಿ ವರದಿ ಒಪ್ಪಿಕೊಳ್ಳುವಂತೆ ಮನವಿ ಸಲ್ಲಿಸಿದೆ.
ನವೆಂಬರ್ ಮೊದಲ ವಾರದೊಳಗೆ ಜಾತಿ ಗಣತಿ ವರದಿ ಒಪ್ಪಿಕೊಳ್ಳದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳುವುದಾಗಿ ನಿಯೋಗ ಎಚ್ಚರಿಕೆ ನೀಡಿದೆ.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸದ್ಯ ಉಪ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ನೀತಿ ಸಂಹಿತೆ ಮುಗಿದ ನಂತರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜಾತಿಗಣತಿ) ವರದಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.