
ಬೆಂಗಳೂರು: ನಾಳೆ ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ ಮಾಡುವುದಾಗಿ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಯಪ್ರಕಾಶ್ ಹೆಗಡೆ, ಜಾತಿಗಣತಿ ವರದಿ ಸಲ್ಲಿಕೆಗೆ ನಾಳೆ ಕೊನೆ ದಿನವಾಗಿದ್ದು, ಸರ್ಕಾರದ ಸೂಚನೆಯಂತೆ ವರದಿ ಸಿದ್ಧವಾಗಿದೆ. ನಾಳೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಜಾತಿಗಣತಿ ವರದಿಯಲ್ಲಿ ಏನಿದೆ ಎಂಬುದು ಬಳಿಕ ಗೊತ್ತಾಗಲಿದೆ. ವರದಿ ಬಿಡುಗಡೆಯಾದ ಬಳಿಕ ಸಾರ್ವಜನಿಕವಾಗಿ ಚರ್ಚೆಯಾದರೆ ಉತ್ತಮ. ಸರ್ಕಾರಕ್ಕೆ ವರದಿ ಸಲ್ಲಿಕೆ ಬಳಿಕ ಸಚಿವ ಸಂಪುಟದಲ್ಲಿ ಚರ್ಚೆಯಾಗಲಿದೆ. ಬಳಿಕ ಈ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಹೇಳಿದರು.