ಬೆಂಗಳೂರು: ಜಾತಿ ಗಣತಿ ತಿರಸ್ಕರಿಸುವ ಒಕ್ಕಲಿಗರ ಸಂಘದ ಮನವಿ ಪತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹಿ ಹಾಕಿದ್ದಾರೆ.
ಈ ಮೂಲಕ ಜಾತಿಗಣತಿ ವರದಿಗೆ ಖುದ್ದು ಡಿಸಿಎಂ ಡಿಕೆಶಿ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗಕ್ಕೆ ಒಕ್ಕಲಿಗರ ಸಂಘದಿಂದ ಮನವಿ ಪತ್ರ ಸಲ್ಲಿಸಲಾಗಿದ್ದು, ಇದರಲ್ಲಿ ಸಮುದಾಯದ ನಾಯಕರಾದ ಹೆಚ್.ಡಿ. ದೇವೇಗೌಡರು, ಎಸ್.ಎಂ. ಕೃಷ್ಣ, ಡಿ.ವಿ. ಸದಾನಂದ ಗೌಡ, ಶೋಭಾ ಕರಂದ್ಲಾಜೆ, ಹೆಚ್.ಡಿ. ಕುಮಾರಸ್ವಾಮಿ, ಆರ್. ಅಶೋಕ, ಅಶ್ವತ್ಥ್ ನಾರಾಯಣ ಸೇರಿದಂತೆ ಹಲವರು ಸಹಿ ಮಾಡಿದ್ದಾರೆ.
ಈ ಮನವಿ ಪತ್ರಕ್ಕೆ ಡಿಸಿಎಂ ಡಿಕೆಶಿ ಕೂಡ ಸಹಿ ಮಾಡಿದ್ದು, ಕಾಂತರಾಜ ಆಯೋಗ ವರದಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ವರದಿ ಜಾರಿಗೆ ಸಚಿವರಾದ ಪರಮೇಶ್ವರ್, ಸತೀಶ್ ಜಾರಕಿಹೊಳಿ, ಶಿವರಾಜ್ ತಂಗಡಗಿ ಆಗ್ರಹಿಸಿದ್ದಾರೆ. ಆದರೆ ಒಕ್ಕಲಿಗ ಮತ್ತು ಲಿಂಗಾಯಿತ ಸಮಾಜದ ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ.