ತುಮಕೂರು: ಜಾತಿ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ನಿಲ್ಲಿಸಬೇಕು ಎಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಗೌರವಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯ ಮಾಡಿದ್ದಾರೆ.
ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಸುದ್ದಿಗೋಷ್ಠಿ ನಡೆಸಿದ ಅವರು, ಆರ್ಥಿಕತೆ ಆಧಾರದ ಮೇಲೆ ಮೀಸಲಾತಿಯನ್ನು ನೀಡಲಿ. ಸರ್ಕಾರಗಳು ಜಾತಿಯಲ್ಲಿನ ಬಡವರನ್ನು ಹುಡುಕಿ ಅದರ ಆಧಾರದ ಮೇಲೆ ಮೀಸಲಾತಿ ನೀಡಬೇಕು. ಈಗಾಗಲೇ ನಡೆದಿರುವ ಜಾತಿ ಗಣತಿಯ ವರದಿ ಮಂಡನೆ ಆಗಬೇಕು. ಅದರ ಆಧಾರದ ಮೇಲೆ ಸರ್ಕಾರ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಬಲ ಜಾತಿಗಳು, ಬಲಿಷ್ಠ ಸಮುದಾಯಗಳನ್ನು 2 ಎಗೆ ಸೇರ್ಪಡೆ ಮಾಡಬಾರದು ಎಂಬ ಒತ್ತಾಯ ಕೇಳಿ ಬಂದಿದೆ.