alex Certify ಪ್ರಿಯಕರನ ಜೊತೆ ಪತಿಯ ಕೊಂದ ಪತ್ನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಿಯಕರನ ಜೊತೆ ಪತಿಯ ಕೊಂದ ಪತ್ನಿ

ಪುರ್ನಿಯಾ: ಪತ್ನಿಯ ವಿವಾಹೇತರ ಸಂಬಂಧದ ಬಗ್ಗೆ ತಿಳಿದ ಪತಿಯನ್ನು ಪ್ರಿಯಕರ ಮತ್ತು ಪತ್ನಿ ಸೇರಿ ಕತ್ತು ಹಿಸುಕಿ ಕೊಂದು ಹಾಕಿದ ಘಟನೆ ಬಿಹಾರದ ಪುರ್ನಿಯಾದ ಚಕರ್ಪಾದ ಗ್ರಾಮದಲ್ಲಿ ನಡೆದಿದೆ.

ಮೃತ ಪತಿಯನ್ನು ಪೋಷಿತ್ ಕುಮಾರ್ ಎಂದು ತಿಳಿದು ಬಂದಿದೆ. ಈತನಿಗೆ ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ತಿಳಿದಿರಲಿಲ್ಲ. ಕುಮಾರ್ ಕುಟುಂಬದವರು, ಮಹಿಳೆ ಸಾವಿತ್ರಿದೇವಿ ಅದೇ ಗ್ರಾಮದ ಅರವಿಂದ್ ಮಹಲ್ದಾರ್ ಎಂಬ ವ್ಯಕ್ತಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಳು ಎಂದು ಆರೋಪಿಸಿದ್ದಾರೆ.

ʼಕಿಡ್ನಿ ಸ್ಟೋನ್ʼ ಕರಗಿಸಲು ಇಲ್ಲಿದೆ ಮನೆ ಮದ್ದು

ಕೆಲಸ ಮುಗಿಸಿ ಮನೆಗೆ ಬಂದಾಗ ಕುಮಾರ್ ಇಬ್ಬರು ಒಟ್ಟಿಗೆ ಮನೆಯಲ್ಲಿ ಇರುವುದನ್ನು ನೋಡಿದ್ದಾರೆ. ತಮ್ಮ ರಹಸ್ಯ ಪತಿಗೆ ತಿಳಿದುದ್ದನ್ನು ಅರಿತ ದೇವಿ ಮತ್ತು ಮಹಲ್ದಾರ್ ಹಗ್ಗದಿಂದ ಕುಮಾರ್‌ನ ಕತ್ತು ಹಿಸುಕಿ ಕೊಂದಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ರೋಟ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಹುಡುಕಾಟ ಆರಂಭಿಸಿದ್ದಾರೆ. ಕುಮಾರ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಸಂತ್ರಸ್ತೆಯ ಕುಟುಂಬದವರು ಪತ್ನಿ ಮತ್ತು ಆಕೆಯ ಪ್ರಿಯಕರನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ಠಾಣೆ ಪ್ರಭಾರಿ ಜಿತೇಂದ್ರ ರಾಣಾ ತಿಳಿಸಿದ್ದಾರೆ.

ಕುಮಾರ್ ಮತ್ತು ದೇವಿ ಮದುವೆಯಾಗಿ ಹತ್ತು ವರ್ಷಗಳಾಗಿದ್ದು ಇಬ್ಬರು ಮಕ್ಕಳಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...