ರಾತ್ರಿ ವೇಳೆ ಅಂಗಡಿಗೆ ನುಗ್ಗಿದ ಕಳ್ಳರು ಅಂಗಡಿ ಮಾಲೀಕನನ್ನು ಕತ್ತಿಯಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆಯು ಮಹಾರಾಷ್ಟ್ರದ ಬುಲ್ದಾನ ಜಿಲ್ಲೆಯಲ್ಲಿ ಸಂಬಂಧವಿಸಿದೆ. ಆನಂದ್ ಎಲೆಕ್ಟ್ರಾನಿಕ್ಸ್ ಒಳಗೆ ಈ ಕೃತ್ಯ ಜರುಗಿದ್ದು ಅಂಗಡಿ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.
ಗ್ರಾಹಕರ ಸೋಗಿನಲ್ಲಿ ಅಂಗಡಿಯೊಳಕ್ಕೆ ಬಂದ ಮೂವರು ದರೋಡೆಕೋರರು ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಕೃತ್ಯ ಎಸಗಿದ್ದಾರೆ. ಬುಲ್ದಾನಾದ ಚಿಕ್ಲಿ ನಗರದಲ್ಲಿರುವ ಮೃತ ಕಮಲೇಶ್ ಪೋಪಟ್ ಅಂಗಡಿಗೆ ನುಗ್ಗಿದ ದರೋಡೆಕೋರರು ಅವರು ಅಂಗಡಿ ಬಂದ್ ಮಾಡಲು ತಯಾರಿ ನಡೆಸುತ್ತಿದ್ದ ವೇಳೆ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ.
ಮಹಿಳೆ ಹಾಗೂ ಮಕ್ಕಳ ಸುರಕ್ಷತೆಗಾಗಿ ಹೊಸ ಐಟಿ ನಿಯಮಾವಳಿ; ಹೈಕೋರ್ಟ್ ಗೆ ಕೇಂದ್ರದಿಂದ ಮಹತ್ವದ ಮಾಹಿತಿ
ಪೋಪಟ್ಗೆ ಬೆದರಿಕೆ ಹಾಕಲು ಆರಂಭಿಸಿದ ದರೋಡೆಕೋರರು ಮೊದಲು ಗನ್ ತೋರಿಸಿ ಬೆದರಿಸಿದ್ದಾರೆ. ಬಳಿಕ ಇದೇ ಗುಂಪಿನಲ್ಲಿದ್ದ ಒಬ್ಬ ಕತ್ತಿಯನ್ನು ಹೊರ ತೆಗೆದಿದ್ದಾನೆ. ದರೋಡೆಕೋರರ ಬೇಡಿಕೆಗಳಿಗೆ ಪೋಪಟ್ ಒಪ್ಪದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿದ್ದ ದುಷ್ಕರ್ಮಿಗಳು ಆತನನ್ನು ಕೊಚ್ಚಿ ಕೊಲೆಗೈದಿದ್ದಾರೆ. ಬಳಿಕ ಹಣ ಹಾಗೂ ಇತರೆ ಬೆಲೆ ಬಾಳುವ ವಸ್ತುಗಳ ಜೊತೆ ಎಸ್ಕೇಪ್ ಆಗಿದ್ದಾರೆ.
ರಕ್ತದ ಮಡುವಿನಲ್ಲಿ ಮಲಗಿದ್ದ ಪೋಪಟ್ರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಬದುಕುಳಿಯಲಿಲ್ಲ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.