alex Certify ವಿವಿ ಕ್ಯಾಂಪನ್ ನಲ್ಲೇ ವಿದ್ಯಾರ್ಥಿನಿಗೆ ಕಪಾಳಮೋಕ್ಷ; ಆಘಾತಕಾರಿ ಕೃತ್ಯದ ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಿ ಕ್ಯಾಂಪನ್ ನಲ್ಲೇ ವಿದ್ಯಾರ್ಥಿನಿಗೆ ಕಪಾಳಮೋಕ್ಷ; ಆಘಾತಕಾರಿ ಕೃತ್ಯದ ವಿಡಿಯೋ ವೈರಲ್

ಉತ್ತರ ಪ್ರದೇಶದ ಮೊರಾದಾಬಾದ್‌ನ ತೀರ್ಥಂಕರ್ ಮಹಾವೀರ್ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ್ದಾನೆ. ಇಬ್ಬರ ನಡುವೆ ಆದ ತೀವ್ರ ವಾಗ್ವಾದದಲ್ಲಿ ವಿದ್ಯಾರ್ಥಿಯು ವಿದ್ಯಾರ್ಥಿನಿಗೆ ಅಮಾನುಷವಾಗಿ ಕಪಾಳಮೋಕ್ಷ ಮಾಡಿದ್ದು, ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆಯು ಏಪ್ರಿಲ್ 9 ರಂದು ಸಂಭವಿಸಿದ್ದು, ಹಲವಾರು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಘಟನೆಗೆ ಸಾಕ್ಷಿಯಾಗಿದ್ದರು. ವಿಡಿಯೋ ವೈರಲ್ ಆದ ನಂತರ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಟ್ವಿಟರ್ ಮೂಲಕ ಘೋಷಿಸಿದ್ದು, ವಿಶ್ವವಿದ್ಯಾನಿಲಯ ಆಡಳಿತವೂ ಘಟನೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುತ್ತಿದೆ.
ಘಟನೆಯ ವಿಡಿಯೋ ನೋಡಿದ ಹಲವರು ಈ ಬಗ್ಗೆ ವಿಚಲಿತರಾಗಿದ್ದು ಕ್ಯಾಂಪಸ್‌ನಲ್ಲಿನ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ.

Caught in cam: Male student brutally slaps girl after argument in university campus in UP's Moradabad

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...