alex Certify Caught on Cam: ಹೀಲಿಯಂ ಟ್ಯಾಂಕ್ ಸ್ಫೋಟಕ್ಕೆ ಓರ್ವ ಬಲಿ; ಬೆಚ್ಚಿ ಬೀಳಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Caught on Cam: ಹೀಲಿಯಂ ಟ್ಯಾಂಕ್ ಸ್ಫೋಟಕ್ಕೆ ಓರ್ವ ಬಲಿ; ಬೆಚ್ಚಿ ಬೀಳಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಜನನಿಬಿಡ ಮಾರುಕಟ್ಟೆಯಲ್ಲಿ ಏಕಾಏಕಿ ಹೀಲಿಯಂ ಟ್ಯಾಂಕ್ ಸ್ಫೋಟಗೊಂಡಿದ್ದು, ಇದರ ಪರಿಣಾಮ ಓರ್ವ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು ಬೆಚ್ಚಿಬೀಳಿಸುವ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ತಮಿಳುನಾಡಿನ ಟ್ರಿಚಿಯ ಕೋಟೈ ವಾಸಲ್ ಏರಿಯಾದಲ್ಲಿ ಈ ಘಟನೆ ನಡೆದಿದ್ದು, ನೂರಾರು ಮಂದಿ ಮಾರುಕಟ್ಟೆಯಲ್ಲಿ ವಸ್ತುಗಳ ಖರೀದಿಯಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಸ್ಪೋಟ ಸಂಭವಿಸಿದ್ದು, ಸ್ಥಳದಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ.

ಸ್ಪೋಟದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಆತನನ್ನು ಮುತ್ತು ರವಿ ಎಂದು ಗುರುತಿಸಲಾಗಿದೆ. 13 ವರ್ಷದ ಬಾಲಕ ಸೇರಿದಂತೆ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಪೋಟದ ತೀವ್ರತೆಗೆ ಸುತ್ತಮುತ್ತ ಪಾರ್ಕಿಂಗ್ ಮಾಡಿದ್ದ ಕಾರುಗಳ ಗ್ಲಾಸ್ ಪುಡಿಪುಡಿಯಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...