alex Certify ಕೂದಲಿಡಿದು ಮಹಿಳೆಯರ ಹೊಡೆದಾಟ; ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲಿಡಿದು ಮಹಿಳೆಯರ ಹೊಡೆದಾಟ; ವಿಡಿಯೋ ವೈರಲ್

ನೋಯ್ಡಾ (ಉತ್ತರ ಪ್ರದೇಶ): ನೋಯ್ಡಾದ ಹೈದರ್ ಪಾರ್ಕ್ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಸ್ಥಾನದ ನೇಮಕಾತಿಗೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ.

ಅಪಾರ್ಟ್‌ಮೆಂಟ್ ಮಾಲೀಕರ ಸಂಘವು ತಮ್ಮಷ್ಟಕ್ಕೆ ತಾವು ಆಯ್ಕೆ ಪ್ರಕ್ರಿಯೆ ನಡೆಸಿತ್ತು. ಇದನ್ನು ಅಪಾರ್ಟ್​ಮೆಂಟ್​ ನಿವಾಸಿಗಳು ಖಂಡಿಸಿದರು. ಈ ಸಂದರ್ಭದಲ್ಲಿ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾಗ ಅಲ್ಲಿದ್ದ ಕಾವಲುಗಾರರು ಗಲಾಟೆ ಮಾಡಿದ್ದೇ ಇಂಥ ಅವಘಡಕ್ಕೆ ಕಾರಣವಾಯಿತು.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೋದಲ್ಲಿ ನಿವಾಸಿಯೊಬ್ಬರು ಮಹಿಳಾ ಸಿಬ್ಬಂದಿಯೊಬ್ಬರ ಕೂದಲು ಹಿಡಿದು ಎಳೆದುದಾಡಿದ್ದರೆ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿರುವುದನ್ನು ಕಾಣಬಹುದು. ಕೆಲವು ಕಾವಲುಗಾರರು ಕೋಲುಗಳನ್ನು ಬೀಸಿದ್ದು, ಇದರಿಂದ ಇಬ್ಬರು ಮಹಿಳೆಯರು ಗಾಯಗೊಂಡಿರುವುದಾಗಿ ಆರೋಪಿಸಲಾಗಿದೆ.

ಗಾಯಾಳು ಮಹಿಳೆಯರ ದೂರಿನ ಮೇರೆಗೆ ಇಬ್ಬರು ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...