ಕಳೆದ ವಾರ ಮಣಿಪುರದ ಕಿರಾಣಿ ಅಂಗಡಿಯಲ್ಲಿ ಸ್ಥಳೀಯ ಮಹಿಳೆಗೆ ಕಿರುಕುಳ ನೀಡಿದ ಆರೋಪವನ್ನು ಎದುರಿಸುತ್ತಿದ್ದ ಬಿಎಸ್ಎಫ್ ಯೋಧನನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಡ್ ಕಾನ್ಸ್ಬೇಬಲ್ ಆಗಿರುವ ಸತೀಶ್ ಪ್ರಸಾದ್, ಮಹಿಳೆಯನ್ನು ನಿಂದಿಸಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ವಿಡಿಯೋದಲ್ಲಿ ಸೂಪರ್ ಮಾರ್ಕೆಟ್ ಮಾದರಿಯ ಕಿರಾಣಿ ಅಂಗಡಿಯಲ್ಲಿದ್ದ ಮಹಿಳೆಯ ಎದೆ ಭಾಗವನ್ನು ಬಿಎಸ್ಎಫ್ ಜವಾನ ಸ್ಪರ್ಶಿಸಿ ಕಿರುಕುಳ ನೀಡುತ್ತಿರೋದನ್ನು ಕಾಣಬಹುದಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ವ್ಯಾಪಕವಾಗಿ ಆಕ್ರೋಶ ಹೊರ ಹಾಕಿದ್ದರು.
ಜುಲೈ 20ರಂದು ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ. ಈ ಸಂಬಂಧ ಅರೆಸೈನಿಕ ಪಡೆಗೆ ದೂರು ಕೇಳಿ ಬಂದ ಬಳಿಕ ಈ ಪ್ರಕರಣವನ್ನು ಪರಿಶೀಲಿಸಿದ ಗಡಿ ಭದ್ರತಾ ಪಡೆ ಸತೀಶ್ ಪ್ರಸಾದ್ರನ್ನು ಸೇವೆಯಿಂದ ಅಮಾನತುಗೊಳಿಸಿದೆ ಎಂದು ಬಿಎಸ್ಎಫ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಈಶಾನ್ಯ ರಾಜ್ಯದಲ್ಲಿ ನಡೆದ ಜನಾಂಗೀಯ ನಿಂದೆ ಪ್ರಕರಣದಲ್ಲಿ ಭದ್ರತಾ ಕರ್ತವ್ಯಕ್ಕೆಂದು ತಾತ್ಕಾಲಿಕ ಘಟಕಕ್ಕೆ ನಿಯೋಜನೆ ಮಾಡಲಾಗಿದ್ದ 100 ಬೆಟಾಲಿಯನ್ಗೆ ಸೇರಿದ್ದ ಹೆಡ್ ಕಾನ್ಸ್ಟೇಬಲ್ ಸತೀಶ್ ಪ್ರಸಾದ್ ವಿರುದ್ಧ ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಬಿಎಸ್ಎಫ್ ತಿಳಿಸಿದೆ.
https://twitter.com/i/status/1683527491544129541