alex Certify ಇದ್ದಕ್ಕಿದ್ದಂತೆ ಕುಸಿದು ಮತ್ತೊಬ್ಬ ಯುವಕ ಸಾವು; ಬೆಚ್ಚಿಬೀಳಿಸುವಂತಿದೆ ವಿಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇದ್ದಕ್ಕಿದ್ದಂತೆ ಕುಸಿದು ಮತ್ತೊಬ್ಬ ಯುವಕ ಸಾವು; ಬೆಚ್ಚಿಬೀಳಿಸುವಂತಿದೆ ವಿಡಿಯೋ

ಮೀರತ್​: ಉತ್ತರ ಪ್ರದೇಶದ ಮೀರತ್‌ನಲ್ಲಿ ಯುವಕನೊಬ್ಬ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಘಟನೆಯ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಡಿಸೆಂಬರ್ 2ರ ರಾತ್ರಿ 10:16ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಾಲ್ವರು ಸ್ನೇಹಿತರು ಸೇರಿ ಕಿರಿದಾದ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಯುವಕ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಅಹಿತಕರ ಬೆಳವಣಿಗೆಯಿಂದ ದಿಗ್ಭ್ರಮೆಗೊಂಡ ಮೂವರು ಸ್ನೇಹಿತರು ತಮ್ಮ ಸ್ನೇಹಿತನನ್ನು ಮೇಲೆತ್ತಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಇದಕ್ಕೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...