ಮಡಿಕೇರಿ ತಾಲ್ಲೂಕು ಭಾಗಮಂಡಲ ಮತ್ತು ತಲಕಾವೇರಿಯ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಅಕ್ಟೋಬರ್ 17 ರಂದು ಮಧ್ಯಾಹ್ನ 1.11 ಗಂಟೆಗೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದೆ.
ಅಕ್ಟೋಬರ್ 04 ರಂದು ಬೆಳಗ್ಗೆ 10.35 ಗಂಟೆಗೆ ಸಲ್ಲುವ ವೃಚ್ಛಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ ನೆರವೇರಲಿದ್ದು, ಅ. 14 ರಂದು ಮಧ್ಯಾಹ್ನ 12.05 ಕ್ಕೆ ಸಲ್ಲುವ ಧನು ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಮಧ್ಯಾಹ್ನ 1.25 ಗಂಟೆಗೆ ಸಲ್ಲುವ ಮಕರ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇಡುವುದು.
ಅಕ್ಟೋಬರ್ 17 ರಂದು ಮಧ್ಯಾಹ್ನ 1.11 ಗಂಟೆಗೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ನಡೆಯಲಿದೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಂ.ಕೃಷ್ಣಪ್ಪ ಅವರು ತಿಳಿಸಿದ್ದಾರೆ.