alex Certify BIG NEWS : ಕಾವೇರಿ ವಿವಾದ ಹಳೇ ಸಮಸ್ಯೆ, ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ : ನಟ ಅಭಿಷೇಕ್ ಅಂಬರೀಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕಾವೇರಿ ವಿವಾದ ಹಳೇ ಸಮಸ್ಯೆ, ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ : ನಟ ಅಭಿಷೇಕ್ ಅಂಬರೀಶ್

ಮಂಡ್ಯ : ಕಾವೇರಿ ವಿವಾದ ಹಳೇ ಸಮಸ್ಯೆ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ನಟ ಅಭಿಷೇಕ್ ಅಂಬರೀಶ್ ಹೇಳಿದರು.

ಕಾವೇರಿ ಹೋರಾಟಕ್ಕೆ ಸಾಥ್ ನೀಡಿದ ನಟ ಅಭಿಷೇಕ್ ಇಂದು ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಮಾತನಾಡಿದರು.

ಸುಪ್ರೀಂ ಆದೇಶದಂತೆ ಮತ್ತೆ ತಮಿಳುನಾಡಿಗೆ ನೀರು ಹರಿಸಿದರೆ ಇಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗುತ್ತದೆ . ಕಾವೇರಿ ನೀರು ಹಳೇ ಸಮಸ್ಯೆ, ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು. ಕಾವೇರಿ ಹೋರಾಟಕ್ಕೆ ಒಂದು ವೇದಿಕೆ ಸೃಷ್ಟಿ ಮಾಡುತ್ತೇವೆ, ಚಿತ್ರನಟರು ಇದರಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪ್ರತಿಭಟನಕಾರರು ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...