ನವದೆಹಲಿ : ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದೆಹಲಿಯಲ್ಲಿ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ದೆಹಲಿ ಚಲೋ ನಡೆಸಿದ ಕರವೇ ಕಾರ್ಯಕರ್ತರು ಕಾವೇರಿ ಜಲ ವಿವಾದವನ್ನು ಬಗೆಹರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸಚಿವ ಗಜೇಂದ್ರ ಸಿಂಗ್ ಶೇಖವತ್ ಗೆ ಮನವಿ ಸಲ್ಲಿಸಿದರು.
ಕಾವೇರಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸುವಂತೆ ನೀವು ಸಹಾಯ ಮಾಡಬೇಕು ಎಂದು ಮನವಿ ಮಾಡಿದರು. ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಸಭೆ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಅ.31 ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ CWMA ಸೂಚನೆ ನೀಡಿದೆ. ಈ ಮೂಲಕ CWRA ಆದೇಶ ಎತ್ತಿಹಿಡಿದಿದೆ. ಅಕ್ಟೋಬರ್ 16ರಿಂದ 31ರ ವರೆಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದ್ದು, ಮತ್ತೆ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿದೆ.