alex Certify ಕಾವೇರಿ ವಿವಾದ: ಹೊಸ ಕಮಿಟಿ ಬಂದ ಬಳಿಕ ಚರ್ಚಿಸಿ ಧ್ವನಿ ಎತ್ತುತ್ತೇವೆ ಎಂದ ಫಿಲ್ಮ್ ಚೇಂಬರ್ ಅಧ್ಯಕ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ ವಿವಾದ: ಹೊಸ ಕಮಿಟಿ ಬಂದ ಬಳಿಕ ಚರ್ಚಿಸಿ ಧ್ವನಿ ಎತ್ತುತ್ತೇವೆ ಎಂದ ಫಿಲ್ಮ್ ಚೇಂಬರ್ ಅಧ್ಯಕ್ಷ

ಬೆಂಗಳೂರು: ಕಾವೇರಿ ನದಿ ನೀರಿಗಾಗಿ ಕನ್ನಡ ಚಿತ್ರರಂಗದ ನಟರು ಧ್ವನಿ ಎತ್ತದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಕನ್ನಡ ಪರ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಫಿಲ್ಮ್ ಚೇಂಬರ್ ಮುಂದೆ ಪ್ರತಿಭಟನೆ ನಡೆಸಿದ್ದರು. ಸ್ಯಾಂಡಲ್ ವುಡ್ ನಟರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮ.ಹರೀಶ್ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿರುವುದು ನಮಗೂ ಗೊತ್ತಿರಲಿಲ್ಲ. ನೆಲ, ಜಲ, ಭಾಷೆ ವಿಚಾರ ಬಂದಾಗ ಕನ್ನಡ ಇಂಡಸ್ಟ್ರಿ ಯಾವತ್ತೂ ಬೆಂಬಲವಾಗಿ ನಿಲ್ಲುತ್ತೆ ಎಂದಿದ್ದಾರೆ.

ಸಧ್ಯ ಫಿಲ್ಮ್ ಚೇಂಬರ್ ಎಲೆಕ್ಷನ್ ಇರುವ ಕಾರಣಕ್ಕೆ ಈ ಬಗ್ಗೆ ಚರ್ಚೆ ಮಾಡಿಲ್ಲ. ಹೊಸ ಕಮಿಟಿ ಬಂದ ಬಳಿಕ ಚರ್ಚೆ ಮಾಡಿ ಧ್ವನಿ ಎತ್ತುತ್ತೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...