ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ಮಧ್ಯೆ ಕರ್ನಾಟಕ ಜಲಸಂರಕ್ಷಣಾ ಸಮಿತಿ ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಿದೆ. ಕಾವೇರಿ ಹೋರಾಟಕ್ಕೆ ಸ್ಯಾಂಡಲ್ ವುಡ್ ನಟ-ನಟಿಯರು ಬೆಂಬಲ ನೀಡಿದ್ದಾರೆ.
ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ, ಪ್ರತಿಕ್ರಿಯಿಸಿದ್ದು, ಕಾವೇರಿ ನಮ್ಮೆಲ್ಲರ ತಾಯಿ, ರಾಜ್ಯದ ಪಾಲಿಗೆ ಜೀವನದಿ. ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದಿದ್ದಾರೆ.
ಕಾವೇರಿ ಸಮಸ್ಯೆ ಈಗಿನದ್ದಲ್ಲ, ಸುಮಾರು ವರ್ಷಗಳದ್ದು. ಕಾವೇರಿ ಸಮಸ್ಯೆಯನ್ನು ಹಿರಿಯರು ಕೂತು ಬಗೆಹರಿಸಬೇಕು. ಹೋರಾಟದ ವಿಚಾರವಾಗಿ ಹಿರಿಯ ನಟ ಶಿವಣ್ಣ ಏನ್ ನಿರ್ಧಾರ ಮಾಡುತ್ತಾರೋ ಅದಕ್ಕೆ ಬದ್ಧ ಎಂದು ಹೇಳಿದ್ದಾರೆ.