ಬೆಂಗಳೂರು: ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ದಿನದಿಂದ ದಿನಕ್ಕೆ ಅನ್ನದಾತನ ಆಕ್ರೋಶ ಹೆಚ್ಚಾಗುತ್ತಿದೆ. ರೈತರ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ಈ ನಡುವೆ ಕಾವೇರಿ ನೀರಿಗಾಗಿ ಸೆ.26ರಂದು ಬೆಂಗಳೂರು ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ.
ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ರೈತ ಸಂಘಟನೆ, ಕನ್ನಡಪರ ಸಂಘಟನೆಗಳು ಇಂದು ಮಂಡ್ಯ, ಮದ್ದೂರು ಬಂದ್ ಗೆ ಕರೆ ನೀಡಿ, ರಸ್ತೆಗಿಳಿದು ಹೋರಾಟ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿಯೂ ಪ್ರತಿಭಟನೆಗಳು ಭುಗಿಲೆದ್ದಿವೆ. ಇದೀಗ ಮಂಗಳವಾರ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ರಾಜಧಾನಿ ಬೆಂಗಳೂರು ಬಂದ್ ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಸೆ.26ರಂದು ಬೆಂಗಳೂರು ಸಂಪೂರ್ಣ ಸ್ತಬ್ಧಗೊಳ್ಳುವುದು ಬಹುತೇಕ ಖಚಿತವಾಗಿದೆ.