
ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿದ್ದು, ಬಿಜೆಪಿ ನಾಯಕರು ಕೂಡ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಬಿಜೆಪಿ ನಾಯಕರು ಕಾವೇರಿ ನೀರು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮತ್ತೊಂಡೆ ಬೆಂಗಳೂರಿನಲ್ಲಿ ಕಾವೇರಿ ಹೋರಾಟದ ಕಿಚ್ಚು ತೀವ್ರಗೊಳ್ಳುತ್ತಿದ್ದು, ರೈತರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.