ಬೆಂಗಳೂರು : ಬೆಂಗಳೂರಿನಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ವಾಟಾಳ್ ನಾಗರಾಜ್ ರನ್ನು ಪೊಲೀಸರು ವಶಕ್ಕೆ ಪಡೆದು ಫ್ರೀಡಂ ಪಾರ್ಕ್ ಗೆ ಕರೆದೊಯ್ದಿದ್ದಾರೆ.
ಬೆಂಗಳೂರಿನಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು, ರೈತ ಮುಖಂಡರು, ಸ್ಯಾಂಡಲ್ ವುಡ್ ನಟ-ನಟಿಯರು ಪ್ರತಿಭಟನೆ ನಡೆಸುತ್ತಿದ್ದು, ಕಾವೇರಿ ನಮ್ಮದು ಎಂದು ಘೋಷಣೆಗಳನ್ನು ಕೂಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.ವಾಟಾಳ್ ನಾಗರಾಜ್ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನ್ಯಾಯದೇವತೆಯ ಸಂದೇಶ ಸಾರುವ ಬುರ್ಖಾಧರಿಸಿ ಬಂದಿರುವ ವಾಟಾಳ್ ನಾಗರಾಜ್, ತಲೆಯ ಮೇಲೆ ಖಾಲಿ ಕೊಡ ಹೊತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಕಾವೇರಿ ನೀರಿಗಾಗಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿದ್ದು, ಕನ್ನಡ ಪರ ಸಂಘಟನೆಗಳ ಪ್ರತಿಭಟನೆಗಳು ತೀವ್ರಗೊಂಡಿದೆ.ಕರ್ನಾಟಕ ಬಂದ್ ಗೆ ‘ಸ್ಯಾಂಡಲ್ವುಡ್ ಸಾಥ್’ ನೀಡಿದ್ದು, ಫಿಲ್ಮ್ ಚೇಂಬರ್ ಎದುರು ಧರಣಿ ಆರಂಭವಾಗಿದೆ.