ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಆರಂಭವಾಗಿದೆ.
ನವದೆಹಲಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾವೇರಿ ನದಿ ನೀರು ಕುರಿತು ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಹಾಗೂ ಗೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಯೋಜನೆಗಳ ಅನುದಾನ ವಿಚಾರ, ಬರ ಪರಿಹಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಗಲಿದೆ.
ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಹರಿಸುವುದನ್ನು ಮುಂದುವರೆಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ.ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ಪ್ರಾಧಿಕಾರದ ಆದೇಶದಿಂದ ಹಿನ್ನಡೆಯಾಗಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ರಾಜ್ಯದ ಸಂಸದರು, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆ ನಡೆಯುತ್ತಿದೆ.
ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಚಲುವರಾಯಸ್ವಾಮಿ, ಸಂಸದರಾದ ಗದ್ದಿಗೌಡರ್, ಲೆಹರ್ ಸಿಂಗ್, ಬಚ್ಚೇಗೌಡ, ಸುಮಲತಾ ಅಂಬರೀಶ್, ಕೇಂದ್ರ ಸಚಿವರಾದ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಇದ್ದಾರೆ.