ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಸಿಡಬ್ಲ್ಯುಆರ್ಸಿ ಮಹತ್ವದ ಸಭೆ ನಡೆಯಲಿದೆ.
ತಮಿಳುನಾಡಿಗೆ ನೀರು ಹರಿಸುವಂತೆ ನೀಡಿದ್ದ ಆದೇಶದ ಅವಧಿ ಮುಕ್ತಾಯ ಹಿನ್ನೆಲೆ ಇಂದು ದೆಹಲಿಯಲ್ಲಿ ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಸಲಿದೆ. ಮುಂದಿನ ಅವಧಿಗೆ ನೀರು ಹರಿಸಬೇಕೇ ಬೇಡವೇ ಎಂಬುದರ ಬಗ್ಗೆ ಬೆಳಗ್ಗೆ 11.30ಕ್ಕೆ ಸಿಡಬ್ಲ್ಯುಆರ್ಸಿ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಆದೇಶದಂತೆ ಕರ್ನಾಟಕ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಿತ್ತು. ನಂತರ ಮತ್ತೆ 15 ದಿನ ತಮಿಳುನಾಡಿಗೆ ಮತ್ತೆ 2600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ಕರ್ನಾಟಕಕ್ಕೆ ಸೂಚನೆ ನೀಡಿತ್ತು. ಕರ್ನಾಟಕದಲ್ಲಿ ಮಳೆಯ ಕೊರತೆ ಕಾರಣ ಬಹುತೇಕ ತಾಲೂಕುಗಳಲ್ಲಿ ಬರಪರಿಸ್ಥಿತಿ ಇರುವಂತಹ ಸನ್ನಿವೇಶದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದಕ್ಕೆ ವಿರೋಧ ವ್ಯಕ್ತವಾಗಿದೆ.