ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸೆ.18 ರಂದು ಕಾವೇರಿ ನೀರು ಪ್ರಾಧಿಕಾರದ ಸಭೆ ನಿಗದಿಯಾಗಿದೆ.
ದೆಹಲಿಯಲ್ಲಿ ಕಾವೇರಿ ನೀರು ಪ್ರಾಧಿಕಾರದ ಸಭೆ ನಡೆಯಲಿದ್ದು, ಕಾವೇರಿ ನದಿ ನೀರು ವಿವಾದದ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ.
ತಮಿಳುನಾಡಿಗೆ ಮುಂದಿನ ದಿನ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ಕಾವೇರಿ ನದಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುರ್ತು ಸಭೆ ಕೂಡ ನಡೆಸಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀಡುವ ಪರಿಸ್ಥಿತಿಯಲ್ಲಿ ನಾವಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.
ಹಾಗೆಯೇ ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೆ.21 ಕ್ಕೆ ವಿಚಾರಣೆ ಮುಂದೂಡಿದೆ. ಕರ್ನಾಟಕ ಕಾವೇರಿ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಸೆ.21 ಕ್ಕೆ ವಿಚಾರಣೆ ಮುಂದೂಡಿತ್ತು.