ಬೆಂಗಳೂರು: ಬರಗಾಲದ ನಡುವೆ ಮೊದಲೇ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಈ ಮಧ್ಯೆ ಬೆಂಗಳೂರು ನೀರು ಸರಬರಾಜು ಮಂಡಳಿ ಮತ್ತು ಒಳಚರಂಡಿ ಮಂಡಳಿ ಯಾವುದೇ ಮೂಲಸೌಕರ್ಯ ಶುಲ್ಕವನ್ನು ವಿಧಿಸದೇ ಅಪಾರ್ಟ್ ಮೆಂಟ್ ಗಳಿಗೆ ಹಾಗೂ ಬಡಾವಣೆಗಳಿಗೆ ಕಾವೇರಿ ನೀರು ಸಂಪರ್ಕ ಕಲ್ಪಿಸಬೇಕು ಆದರೆ ಇಲ್ಲೊಂದು ಅಪಾರ್ಟ್ ಮೆಂಟ್ ಗೆ 2.3 ಕೋಇ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ.
ಬೆಂಗಳುರಿನ ಜೆಪಿ ನಗರ 8ನೇ ಹಂತದ ಪಿ ಹೆಚ್ ಎಸ್ ಎನ್ ರಾಯಲ್ ಲೇಕ್ ಫ್ರಂಟ್ ನಿವಾಸಿಗಳಿಗೆ ಕಾವೇರಿ ನೀರು ಸಂಪರ್ಕ ಒದಗಿಸಲು 2.3 ಕೋಟಿ ರೂಗೆ ಬೇಡಿಕೆ ಇಟ್ಟಿದೆ. ಈ ಹಿನ್ನೆಲೆಯಲ್ಲಿ ರಾಯಲ್ ಲೇಕ್ ಫ್ರಂಟ್ ಅಪಾರ್ಟ್ ಮೆಮ್ಟ್ ನಿವಾಸಿಗಳು ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ.
ಈ ಬಗ್ಗೆ ಅಪಾರ್ಟ್ ಮೆಂಟ್ ನಿವಾಸಿಗಳು, ಸೈಟ್ ಮಾಲೀಕರು ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದು, ಮುಂಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ. ಅಲ್ಲದೇ ಜಲಮಂದಳಿ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.