BIG NEWS: ಕಾವೇರಿ ವಿವಾದ: ನಾಳೆ ಪ್ರತಿಭಟನೆಗೆ ಕರೆ ಕೊಟ್ಟ ಬಿಜೆಪಿ; ಬ್ರ್ಯಾಂಡ್ ಬೆಂಗಳೂರಿಗೆ ನೀರು ಒದಗಿಸುವ ಗ್ಯಾರಂಟಿ ಇಲ್ಲ ಎಂದು ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ, ಪ್ರತಿಭಟನೆ ಭುಗಿಲೆದ್ದಿದೆ. ಈ ನಡುವೆ ವಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಹೋರಾಟಕ್ಕೆ ಕರೆ ನೀಡಿವೆ.

ಕಾವೇರಿ ನೀರಿಗಾಗಿ ನಾಳೆ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಬಿಜೆಪಿ ಜಿಲ್ಲಾ ಘಟಕ ಹೋರಾಟ ನಡೆಸಲಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನಾಳೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಸೋಮವಾರದಿಂದ ಎಲ್ಲಾ 28 ಕ್ಷೇತ್ರಗಳಲ್ಲಿ ಕಾವೇರಿ ಬಗ್ಗೆ ಜಾಗೃತಿ ಮೂಡಿಸುತ್ತೇವೆ ಎಂದು ಹೇಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಮಾತೆತ್ತಿದರೆ ಹೇಳುವ ಬ್ರ್ಯಾಂಡ್ ಬೆಂಗಳೂರಿಗೆ ನೀರು ಒದಗಿಸುವ ಗ್ಯಾರಂಟಿ ಇಲ್ಲ. ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ವೇಳೆ ಬೆಂಗಳೂರಿನ ನೀರಿನ ಅಗತ್ಯದ ಬಗ್ಗೆ ಪ್ರಸ್ತಾಪ ಮಾಡಿಲ್ಲ. ರಾಜ್ಯ ಸರ್ಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read