ಬೆಂಗಳೂರು : ಮೇಕೆದಾಟು ಯೋಜನೆಯಿಂದ ಕಾವೇರಿ ನೀರಿನ ಸಮಸ್ಯೆ ಇತ್ಯರ್ಥ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಪ್ರತಿಭಟನೆ ವಿಕೋಪಕ್ಕೆ ಹೋಗಿದೆ. ಕಾವೇರಿ ಜಲ ವಿವಾದದ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಮೇಕೆದಾಟು ಯೋಜನೆಯಿಂದ ಕಾವೇರಿ ನೀರಿನ ಸಮಸ್ಯೆ ಇತ್ಯರ್ಥ ಪಡಿಸಬಹುದು. ಕರ್ನಾಟಕ-ತಮಿಳುನಾಡು ನಡುವಿನ ನೀರಿನ ಸಮಸ್ಯೆ ಬಗೆಹರಿಸಬಹುದು. ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ಸಮಸ್ಯೆ ಸರಿಪಡಿಸಬಹುದು ಎಂದಿದ್ದಾರೆ.ಮೇಕೆದಾಟು ಡ್ಯಾಂ ನಿರ್ಮಿಸಿದ್ರೆ 67 ಟಿಎಂಸಿ ನೀರು ಸಂಗ್ರಹಿಸಬಹುದು. ಮಳೆ ಕೊರತೆ ಸಂದರ್ಭದಲ್ಲಿ ಉಭಯ ರಾಜ್ಯಗಳು ನೀರು ಬಳಸಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಾವೇರಿ ನೀರು ಹರಿಸಲು ಆದೇಶ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಆರಂಭವಾಗಿದೆ. ವರ್ಚುವಲ್ ಮೂಲಕ ಸಭೆ ನಡೆಯುತ್ತಿದ್ದು, ಕರ್ನಾಟಕ, ತಮಿಳುನಾಡು ಅಧಿಕಾರಿಗಳು ವರ್ಚುವಲ್ ಮೂಲಕ ಭಾಗಿಯಾಗಿದ್ದಾರೆ.
ಕಾವೇರಿ ನದಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತೀವೆ. ಜನರ ಹಿತಕ್ಕಾಗಿ ವಿಪಕ್ಷಗಳು ಹೋರಾಟ ಮಾಡುತ್ತಿಲ್ಲ. ಕಾವೇರಿ ವಿಚಾರದಲ್ಲಿ ನಾವು ವಿಫಲವಾಗಿದ್ದೇವೆ ಅನ್ನೋದು ಸರಿಯಲ್ಲ , ಕರ್ನಾಟಕ ಜನರ ಹಿತ ಕಾಪಾಡುವುದು ನಮ್ಮ ಸರ್ಕಾರ ಬದ್ಧ ಎಂದು ಸಿಎಂ ಹೇಳಿದರು.