ಮತ್ತೆ 15 ದಿನ ಕಾವೇರಿ ನೀರು ಹರಿಸಲು ಸೂಚನೆ: ಇಂದು ವಿಶೇಷ ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿಗೆ ಮುಂದಿನ ದಿನ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ಕಾವೇರಿ ನದಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತುರ್ತು ಸಭೆ ಕರೆದಿದ್ದಾರೆ. ಬುಧವಾರ ಮಧ್ಯಾಹ್ನ 12:30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಶೇಷ ತುರ್ತು ಸಭೆ ನಡೆಯಲಿದೆ.

ಎಲ್ಲಾ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯದ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾವೇರಿ ನದಿ ಪಾತ್ರದ ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾವೇರಿ ನದಿ ನೀರು ನಿಯಂತ್ರಣ ಸಮಿತಿ 15 ದಿನ ಗಳವರೆಗೆ ಪ್ರತಿದಿನ 5000 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮಂಗಳವಾರ ರಾತ್ರಿಯೇ ಸಂಪುಟ ಸಹೋದ್ಯೋಗಿಗಳು, ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಇಂದು ಮಧ್ಯಾಹ್ನ ವಿಶೇಷ ತುರ್ತು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read