ಮಂಡ್ಯ : ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ KRS ಜಲಾಶಯಕ್ಕೆ ಮುತ್ತಿಗೆ ಹಾಕಲು ರೈತರು ಯತ್ನಿಸಿದ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS ಡ್ಯಾಂಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪ್ರತಿಭಟನಾನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರ ಜೊತೆ ಪ್ರತಿಭಟನಾನಿರತ ರೈತರ ಮಾತಿನ ಚಕಮಕಿ ನಡೆದಿದೆ.
ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ ಮಂಡ್ಯದಲ್ಲಿ ಕೆಲವು ಸಂಘಟನೆಗಳು ಬೀದಿಗಳಿದು ಪ್ರತಿಭಟನೆ ನಡೆಸುತ್ತಿದೆ. ಕಳೆದ 1ವಾರದಿಂದ ಪ್ರತಿಭಟನೆ ಕಾವು ಜೋರಾಗಿದ್ದು, ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸೆ.6 ಕ್ಕೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.