ಕೋಲ್ಕತ್ತಾ: ಸಿಬಿಐ ಅಧಿಕಾರಿಗಳು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ, ಟಿಎಂಸಿ ಮುಖ್ಯಸ್ಥ ಅನುಬ್ರತಾ ಮೊಂಡಲ್ ಅವರನ್ನು ಬಂಧಿಸಿದ್ದಾರೆ.
ಅನುಬ್ರತಾ ಮೊಂಡಲ್ ವಿರುದ್ಧ ಜಾನುವಾರುಗಳ ಕಳ್ಳಸಾಗಾಣಿಕೆ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮೊಂಡಲ್ ಅವರಿಗೆ ಸಮನ್ಸ್ ನೀಡಿದ್ದರೂ ಕೂಡ ಯಾವುದೇ ಉತ್ತರ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಬೋಲ್ಪುರದಲ್ಲಿ ಅನುಬ್ರತಾ ಮೊಂಡಲ್ ಅವರನ್ನು ಸಿಬಿಐ ಬಂಧಿಸಿದೆ.
ಈ ಹಿಂದೆ ಬರೋಬ್ಬರು 10 ಬಾರಿ ಸಿಬಿಐ ಮೊಂಡಲ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಆದಾಗ್ಯೂ ವಿಚಾರಣೆಗೆ ಹಾಜರಾಗಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅನುಬ್ರತಾ ಮೊಂಡಲ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.