ಬಳ್ಳಾರಿ: ಬಳ್ಳಾರಿ ಕೇಂದ್ರ ತೆರಿಗೆ ಕಚೇರಿಯ ಅಧೀಕ್ಷಕ ಸಿಬಿಐ ಬಲೆಗೆ ಬಿದ್ದಿದ್ದಾರೆ. 80 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಅವರು ಸಿಬಿಐ ಬಲೆಗೆ ಬಿದ್ದಿದ್ದಾರೆ. ಜಿಎಸ್ಟಿ ದಂಡದ ಮೊತ್ತ ರದ್ದುಗೊಳಿಸಿ ಪ್ರಕರಣ ಇತ್ಯರ್ಥ ಪಡಿಸಲು ಅವರು ಲಂಚ ಸ್ವೀಕರಿಸುತ್ತಿದ್ದರು.
ಬಳ್ಳಾರಿಯ ಈಶ್ವರಯ್ಯ ಅವರಿಂದ 80 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಕೇಂದ್ರ ತೆರಿಗೆ ಕಚೇರಿ ಅಧೀಕ್ಷಕ ಮಧುಸೂದನ್ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಸಿಬಿಐ ಮತ್ತು ಬಳ್ಳಾರಿಯ ಎಸಿಬಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.