alex Certify ಅಪಹರಿಸಿ ಕೊಲೆ ಮಾಡಿದ ಪ್ರಕರಣ; ಮಾಜಿ ಪೊಲೀಸ್ ಅಧಿಕಾರಿಗೆ 10 ವರ್ಷ ಜೈಲು ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಹರಿಸಿ ಕೊಲೆ ಮಾಡಿದ ಪ್ರಕರಣ; ಮಾಜಿ ಪೊಲೀಸ್ ಅಧಿಕಾರಿಗೆ 10 ವರ್ಷ ಜೈಲು ಶಿಕ್ಷೆ

ಚಂಡೀಗಢ : ಅಪಹರಿಸಿ, ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಅಧಿಕಾರಿಯೊಬ್ಬರಿಗೆ 10 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ.

ಕೇಂದ್ರೀಯ ತನಿಖಾ ದಳದ(ಸಿಬಿಐ) ವಿಶೇಷ ನ್ಯಾಯಾಲಯವು ಈ ತೀರ್ಪು ವಿಧಿಸಿದೆ. ಪಂಜಾಬ್ ನ ಮಾಜಿ ಪೊಲೀಸ್ ಇನ್ಸ್ ಪೆಕ್ಟರ್ ಮೇಜರ್ ಸಿಂಗ್ ಅವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗಿದೆ.

ಅಮೃತಸರ ಜಿಲ್ಲೆಯ ಜಸ್ಪಾಲ್ ಮೆಹ್ತಾ ಎಂಬ ಗ್ರಾಮದ ಸಂತೋಖ್ ಸಿಂಗ್ ಎಂಬುವವರನ್ನು ಪೊಲೀಸ್ ಸ್ಟೇಷನ್ ಹೌಸ್ ನ ಎಚ್ ಒ ಆಗಿ ಕಾರ್ಯ ನಿರ್ವಹಿಸಿದ್ದ ತರುಣ್ ಅವರ ಜೊತೆ ಮೇಜರ್ ಸಿಂಗ್ ಸೇರಿಕೊಂಡು ಅಪಹರಿಸಿ ಹತ್ಯೆ ಮಾಡಿರುವ ಆರೋಪ ಸಾಬೀತಾಗಿದ್ದಕ್ಕೆ ಈ ಶಿಕ್ಷೆ ಪ್ರಕಟಿಸಲಾಗಿದೆ.

ಪಂಜಾಬ್ ರಾಜ್ಯ ವಿದ್ಯುತ್ ಮಂಡಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಖ್ ಸಿಂಗ್ ಅವರನ್ನು ಕರೆದುಕೊಂಡು ಹೋಗಿ ಅಕ್ರಮ ಬಂಧನದಲ್ಲಿ ಇರಿಸಲಾಗಿತ್ತು. ಆಗ ಅವರ ತಾಯಿ ಸ್ವರಣ್ ಕೌರ್ ಅವರು ಹರಿಯಾಣ ಹಾಗೂ ಪಂಜಾಬ್ ಹೈಕೋರ್ಟ್ ಗೆ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಈ ಮೂಲಕ ತನಿಖೆ ನಡೆಸುವಂತೆ ಕೋರಿದ್ದರು.

ಆ ನಂತರ ಹೈಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಆಗ ಸಿಬಿಐ, ಇನ್ಸ್ ಪೆಕ್ಟರ್ ಮೇಜರ್ ಸಿಂಗ್ ಅಪಹರಿಸಿ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಆರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...