alex Certify BIG BREAKING: ಮಾಜಿ ಸಚಿವ ವಿನಯ್ ಕುಲಕರ್ಣಿ 3 ದಿನ ಸಿಬಿಐ ಕಸ್ಟಡಿಗೆ, ಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಾಜಿ ಸಚಿವ ವಿನಯ್ ಕುಲಕರ್ಣಿ 3 ದಿನ ಸಿಬಿಐ ಕಸ್ಟಡಿಗೆ, ಕೋರ್ಟ್ ಆದೇಶ

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಮೂರು ದಿನ ಸಿಬಿಐ ಕಸ್ಟಡಿಗೆ ನೀಡಲಾಗಿದೆ.

ಧಾರವಾಡದ 32 ನೇ ಸೆಷನ್ಸ್ ಕೋರ್ಟ್ ಗೆ ಇಂದು ಮತ್ತೊಮ್ಮೆ ವಿನಯ ಕುಲಕರ್ಣಿ ಅವರನ್ನು ಹಾಜರುಪಡಿಸಲಾಗಿದ್ದು, ನವೆಂಬರ್ 9 ರಂದು ಅವರನ್ನು ಕೋರ್ಟಿಗೆ ಹಾಜರುಪಡಿಸಲು ತಿಳಿಸಲಾಗಿದೆ. ಮೂರು ದಿನ ಕಸ್ಟಡಿಗೆ ವಹಿಸಬೇಕೆಂದು ಸಿಬಿಐ ಮಾಡಿದ ಮನವಿಯನ್ನು ಪುರಸ್ಕರಿಸಲಾಗಿದೆ.

ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಹಿಂಡಲಗಾ ಜೈಲಲ್ಲಿರುವ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...