ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ರೈಲ್ವೆ ಸಚಿವ, ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರೀಯ ತನಿಖಾ ದಳವು ಕೇಂದ್ರದ ಅನುಮತಿಯನ್ನು ಪಡೆದುಕೊಂಡಿದೆ.
ಸಂಸ್ಥೆಯು ಶುಕ್ರವಾರ ವಿಶೇಷ ನ್ಯಾಯಾಲಯದ ಮುಂದೆ ಮಂಜೂರಾತಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಸಿಬಿಐ ಸಲ್ಲಿಸಿದ ಚಾರ್ಜ್ ಶೀಟ್ ಅನ್ನು ವಿಶೇಷ ನ್ಯಾಯಾಲಯವು ಗಮನದಲ್ಲಿಟ್ಟುಕೊಳ್ಳಲು ಸಕ್ಷಮ ಪ್ರಾಧಿಕಾರದಿಂದ ಕಾನೂನು ಕ್ರಮ ಜರುಗಿಸಲು ಅನುಮತಿಯು ಅಪೇಕ್ಷಿತವಾಗಿದೆ ಎಂದು ಹೇಳಲಾಗಿದೆ.
ಕಳೆದ ವರ್ಷ ಅಕ್ಟೋಬರ್ 7 ರಂದು ಸಿಬಿಐ ಲಾಲು ಯಾದವ್, ಅವರ ಪತ್ನಿ ರಾಬ್ರಿ ದೇವಿ ಮತ್ತು ಇತರ 14 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು, ಅವರ ಕುಟುಂಬಕ್ಕೆ ಉಡುಗೊರೆಯಾಗಿ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ನೇಮಕಾತಿ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.