
ನವದೆಹಲಿ: ವೈದ್ಯ ಸೀಟುಗಳ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET-UG 2022)ಯಲ್ಲಿ ಅಕ್ರಮ ಎಸಗಿದ ಆರೋಪದಡಿ ದೆಹಲಿ ಮತ್ತು ಹರಿಯಾಣದ 8 ಆರೋಪಿಗಳನ್ನು ಸಿಬಿಐ ಬಂಧಿಸಿದೆ.
ನೀಟ್ ಪರೀಕ್ಷೆ ನಡೆದ ಮರು ದಿನವೇ 8 ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆಯಷ್ಟೇ ನೀಟ್ ಗೆ ಸುಮಾರು 19 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶಾತಿ ಪಡೆಯಲು ನೀಟ್ ಪರೀಕ್ಷೆಯನ್ನು ನಡೆಸಲಾಗುತ್ತದೆ. ದೇಶಾದ್ಯಂತ 18 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ದೆಹಲಿ ಮತ್ತು ಹರಿಯಾಣದ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದ ಆರೋಪ ಕೇಳಿ ಬಂದಿದ್ದು, ಮಾಸ್ಟರ್ ಮೈಂಡ್ ಸುಶೀಲ್ ರಂಜನ್ ಸೇರಿದಂತೆ 8 ಆರೋಪಿಗಳನ್ನು ಸಿಬಿಐ ಬಂಧಿಸಿದೆ.
ಈ ಮೂಲಕ ನೀಟ್ ಅಕ್ರಮದ ದಂಧೆಯನ್ನು ಭೇದಿಸಿದೆ. ಮಾಸ್ಟರ್ ಮೈಂಡ್ ಸೇರಿದಂತೆ ಎಂಟು ಆರೋಪಿಗಳನ್ನು ಬಂಧಿಸಿದೆ.