![](https://kannadadunia.com/wp-content/uploads/2019/03/siddu-cm-hasan-cong.jpg)
ಬೆಂಗಳೂರು : ಡಿಸಿಎಂ ಡಿ. ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಸರ್ಕಾರದ ಸೇವೆಯಲ್ಲಿದ್ದವರ ವಿರುದ್ಧ ತನಿಖೆಯಾಗಬೇಕಾದರೆ ಸರ್ಕಾರದ ಅನುಮತಿ ಅವಶ್ಯ. 2019 ರಲ್ಲಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತನಿಖೆಗೆ ಅನುಮತಿಸಿದಾಗ ಅವರು ಶಾಸಕರಾಗಿದ್ದರು. ಅವರ ವಿರುದ್ಧ ತನಿಖೆಗೆ ಕಾನೂನು ರೀತ್ಯವಾಗಿ ವಿಧಾನಸಭಾಧ್ಯಕ್ಷರಿಂದ ಅನುಮತಿ ಪಡೆದು ನಂತರ ಮುಖ್ಯಮಂತ್ರಿಗಳು ತನಿಖೆ ಕೈಗೊಳ್ಳಲು ಆದೇಶಿಸಬೇಕು.
ಆದರೆ ವಿಧಾನಸಭಾಧ್ಯಕ್ಷರಿಂದ ಯಾವುದೇ ಅನುಮತಿ ಪಡೆಯದೆ ಹಾಗೂ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪರಿಗಣಿಸದೇ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೌಖಿಕವಾಗಿ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು. ಅವರ ಮೌಖಿಕ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿಗಳು ಸಿಬಿಐ ತನಿಖೆಗೆ ವಹಿಸಿದ್ದಾರೆ. ಈ ರೀತಿ ಮಾಡುವುದು ಕಾನೂನು ಬಾಹಿರ ಕ್ರಮ ಎಂದು ಹೇಳಿದ್ದಾರೆ.