ಪಾಟ್ನಾ: ಹೊಸ ಭ್ರಷ್ಟಾಚಾರ ಪ್ರಕರಣದಲ್ಲಿ ಆರ್.ಜೆ.ಡಿ. ನಾಯಕ ಲಾಲೂ ಪ್ರಸಾದ್ ಯಾದವ್ ಅವರಿಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ) ಶುಕ್ರವಾರ ಶೋಧ ನಡೆಸಿದೆ.
ಇದು ಲಾಲು ಯಾದವ್ ಮತ್ತು ಅವರ ಮಗಳ ವಿರುದ್ಧ ದಾಖಲಾದ ಹೊಸ ಪ್ರಕರಣವಾಗಿದೆ. ಪ್ರಾಥಮಿಕ ತನಿಖೆಯನ್ನು ಸಿಬಿಐ ಆರಂಭಿಸಿದ್ದು ಅದನ್ನು ಈಗ ಎಫ್.ಐ.ಆರ್. ಆಗಿ ಪರಿವರ್ತಿಸಲಾಗಿದೆ.
ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪುತ್ರಿಯ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಭ್ರಷ್ಟಾಚಾರದ ಹೊಸ ಪ್ರಕರಣವನ್ನು ದಾಖಲಿಸಿದೆ. ಇಂದು ಲಾಲೂ ನಿವಾಸ ಸೇರಿದಂತೆ ಪಾಟ್ನಾದ 15 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸುತ್ತಿದೆ. ಲಾಲು ಪ್ರಸಾದ್ ಯಾದವ್ ಅವರ ಅಧಿಕಾರಾವಧಿಯಲ್ಲಿ ನಡೆದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿಗಳು ನಡೆದಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.