ನವದೆಹಲಿ: ಪಂಜಾಬ್ ಲುಧಿಯಾನದಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜೀವ್ ಅರೋರಾ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಇಂದು ಶೋಧ ನಡೆಸಿದೆ.
ಮನಿ ಲಾಂಡರಿಂಗ್ ತನಿಖಾ ಪ್ರಕರಣದಲ್ಲಿ ಈ ದಾಳಿಗಳು ನಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಎಎಪಿಯ ರಾಜ್ಯಸಭಾ ಸಂಸದ ಅರೋರಾ ಅವರು ತಮ್ಮ ಕಂಪನಿಯ ಹೆಸರಿನಲ್ಲಿ ಕೋಟ್ಯಂತರ ಮೌಲ್ಯದ ಭೂಮಿಯನ್ನು ಮೋಸದಿಂದ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.ಇಡಿ ಕ್ರಮಕ್ಕೆ ಪ್ರತಿಕ್ರಿಯಿಸಿದ ಅರೋರಾ, ಶೋಧ ಕಾರ್ಯಾಚರಣೆಯ ಕಾರಣದ ಬಗ್ಗೆ ತನಗೆ ಖಚಿತ ಮಾಹಿತಿ ಇಲ್ಲ ಎಂದು ಹೇಳಿದರು.