ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ನಿವಾಸದ ಮೇಲೆ ಕೇಂದ್ರ ತನಿಖಾ ದಳ ಮಂಗಳವಾರ ಬೆಳಗ್ಗೆ ದೆಹಲಿ, ಹೈದರಾಬಾದ್ ಮತ್ತು ಚೆನ್ನೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ.
ವರದಿಗಳ ಪ್ರಕಾರ, ಈ ದಾಳಿಗಳು ಮಗ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿವೆ. ಈ ಹಿಂದೆಯೂ ಅವರ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು.
ಹೊಸದಾಗಿ ಪ್ರಕರಣ ದಾಖಲಿಸಿದ್ದ ಸಿಬಿಐ ಅಧಿಕಾರಿಗಳು ಇಂದು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮನೆ ಮೇಲೆ ದಾಳಿ ನಡೆಸಿದ್ದಾರೆ. ದೆಹಲಿ, ಮುಂಬೈ ಹಾಗೂ ತಮಿಳುನಾಡಿನ ನಿವಾಸಗಳಲ್ಲಿ ದಾಳಿ ಮಾಡಲಾಗಿದೆ. ಮನೆ, ಕಚೇರಿ ಸೇರಿದಂತೆ 7 ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.